ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,984 ನೂತನ ಕೋವಿಡ್ ಸೋಂಕು ಪ್ರಕರನ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,10,628ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಡಿಸೆಂಬರ್ 15) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹೈಟಿಯಲ್ಲಿ ಭೀಕರ ದುರಂತ; ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡು 60 ಮಂದಿ ಸಜೀವ ದಹನ
24 ಗಂಟೆಯಲ್ಲಿ ಕೋವಿಡ್ ನಿಂದ 247 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಒಟ್ಟು 4,76,135 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 87,562ಕ್ಕೆ ಇಳಿಕೆಯಾಗಿದೆ.
ಕಳೆದ 48 ದಿನಗಳಿಂದ ದೇಶದಲ್ಲಿ 15,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಸೋಂಕು ಪ್ರಕರಣ ವರದಿಯಾಗುತ್ತಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.38ರಷ್ಟಿದೆ.
ಭಾರತದಲ್ಲಿ 24ಗಂಟೆಗಳಲ್ಲಿ 6,984 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಕೇರಳದಲ್ಲಿ 3,377 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.