Advertisement

ಭಾರತ:24ಗಂಟೆಯಲ್ಲಿ 71ಸಾವಿರ ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ 8.92 ಲಕ್ಷಕ್ಕೆ ಇಳಿಕೆ

11:03 AM Feb 09, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 71,365 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಫೆ.09) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಹಿಜಾಬ್ ಹಾಕಿಸುತ್ತಾರೆ: ಸಚಿವ ಸುನೀಲ್ ಕುಮಾರ್

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 8,92,828ಕ್ಕೆ ಇಳಿಕೆಯಾಗಿದೆ. ಅಲ್ಲದೇ ಇದು ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯ ಶೇ.2.11ರಷ್ಟಿದೆ ಎಂದು ವರದಿ ವಿವರಿಸಿದೆ.

24ಗಂಟೆಯಲ್ಲಿ 1,02,063 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.4.54ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.7.57ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 1,217 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,05,279ಕ್ಕೆ ಏರಿಕೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next