ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿನ ಪ್ರಕರಣಗಳು ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದೆ. ಕಳೆದೆರಡು ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 40% ರಷ್ಟು ಹೆಚ್ಚಾಗಿದೆ. ಬುಧವಾರ ದೇಶದದಲ್ಲಿ 7240 ಪ್ರಕರಣಗಳು ವರದಿಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಭಾರತದಲ್ಲಿ ದೈನಂದಿನ ಸೋಂಕು ಪ್ರಕರಣಗಳು 94 ದಿನಗಳ ನಂತರ ಐದು ಸಾವಿರ ಗಡಿ ದಾಟಿದೆ (ಮಂಗಳವಾರ 5,233 ಪ್ರಕರಣಗಳು ವರದಿಯಾಗಿತ್ತು). ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 32,498 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇದುವರೆಗೆ 4.31 ಕೋಟಿ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಬುಧವಾರ ಎಂಟು ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ 5,24,723 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ವಿಮಾನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ: ಡಿಜಿಸಿಎ
Related Articles
ಮಹಾರಾಷ್ಟ್ರ ಮತ್ತು ಕೇರಳದಂತಹ ರಾಜ್ಯಗಳಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚುತ್ತಿವೆ. ಬುಧವಾರ ಮಹಾರಾಷ್ಟ್ರದಲ್ಲಿ 2701 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಜನವರಿ 25ರ ಬಳಿಕ ಇದು ಅತೀ ಹೆಚ್ಚಿನ ಸೋಂಕು ವರದಿಯಾಗಿದೆ. ಕೇರಳದಲ್ಲಿ ಬುಧವಾರ 2271 ಹೊಸ ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ ಒಂದು ವಾರದಲ್ಲಿ 10,805 ಹೊಸ ಸೋಂಕುಗಳು ವರದಿಯಾಗಿವೆ.