Advertisement

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

10:34 AM Dec 06, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,306 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 8,834 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಡಿಸೆಂಬರ್ 06) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 98,416ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 552 ದಿನಗಳ ಕನಿಷ್ಠದ್ದಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2,796 ಮಂದಿ ಕೋವಿಡ್ ನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,73,326ಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಕ್ಯೆ 3,46,33,255ಕ್ಕೆ ತಲುಪಿದೆ. ಕೇರಳದಲ್ಲಿಯೂ ಒಂದೇ ದಿನದಲ್ಲಿ ಕೋವಿಡ್ ನಿಂದ 263 ಮಂದಿ ಸಾವನ್ನಪ್ಪಿದ್ದಾರೆ. ಸತತ 161 ದಿನಗಳಿಂದ ಪ್ರತಿದಿನ ದೇಶದಲ್ಲಿ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ.

Advertisement

ಭಾರತದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ದಾಖಲೆಯ ಶೇ.98.35ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 24ಗಂಟೆಗಳಲ್ಲಿ 819 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next