ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,318 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,07,019ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ನವೆಂಬರ್ 27) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಾನ್ಪುರ ಟೆಸ್ಟ್: ಸಾಹಾ ಬದಲು ವಿಕೆಟ್ ಕೀಪಿಂಗ್ ಗೆ ಆಗಮಿಸಿದ ಕೆ.ಎಸ್.ಭರತ್!
ಭಾರತದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,63,749ಕ್ಕೆ ಏರಿಕೆಯಾಗಿದೆ. 24ಗಂಟೆಗಳಲ್ಲಿ ಕೋವಿಡ್ ನಿಂದ 465 ಮಂದಿ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,67,933ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಸತತ 50 ದಿನಗಳಿಂದ ದಿನಂಪ್ರತಿ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. ಇದೀಗ 153 ದಿನಗಳಿಂದ ಪ್ರತಿದಿನ 50,000ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪತ್ತೆಯಾಗುತ್ತಿದೆ.
2020ರ ಮಾರ್ಚ್ ನಂತರ ಸಕ್ರಿಯ ಕೋವಿಡ್ ಪ್ರಕರಣ ಸಂಖ್ಯೆ 1,07,019ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ 98.34ರಷ್ಟಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.