Advertisement

ಭಾರತದಲ್ಲಿ 8,954 ಕೋವಿಡ್ ಪ್ರಕರಣ ಪತ್ತೆ, 1 ಲಕ್ಷಕ್ಕಿಂತ ಕೆಳಕ್ಕಿಳಿದ ಸಕ್ರಿಯ ಪ್ರಕರಣ

01:12 PM Dec 01, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,954 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,96,776ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಡಿಸೆಂಬರ್ 01) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 267 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,69,247ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,023ಕ್ಕೆ ಇಳಿಕೆಯಾಗಿದೆ. ಇದು 547 ದಿನಗಳ ನಂತರದ ಕನಿಷ್ಠದ್ದಾಗಿದೆ.

ಸತತ 54 ದಿನಗಳಿಂದ ದೇಶದಲ್ಲಿ ದಿನಂಪ್ರತಿ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. 156 ದಿನಗಳಿಂದ ಪ್ರತಿದಿನ 50,000ಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ ಎಂದು ಅಂಕಿಅಂಶ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next