Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಏರಿಕೆ, ಸಾವಿನ ಸಂಖ್ಯೆ ಇಳಿಕೆ

09:35 AM Jun 09, 2021 | Team Udayavani |

ನವದೆಹಲಿ: ಭಾರತದಲ್ಲಿ ಕೆಲವು ದಿನಗಳಿಂದ ಇಳಿಕೆಯಾಗುತ್ತಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ 24ಗಂಟೆಗಳಲ್ಲಿ ಅಲ್ಪ ಹೆಚ್ಚಳ ಕಂಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಜೂನ್ 09) ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ, 24ಗಂಟೆಯಲ್ಲಿ 92 ಸಾವಿರ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 2,219 ಮಂದಿ ಸಾವನ್ನಪ್ಪಿದ್ದಾರೆ.

Advertisement

ಇದನ್ನೂ ಓದಿ:ಕಾನ್ಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 17ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

ಕಳೆದ ಕೆಲವು ವಾರಗಳಿಂದ ಕೋವಿಡ್ ಎರಡನೇ ಅಲೆ ಸೋಂಕು ಪ್ರಕರಣ ಇಳಿಕೆಯಾಗುತ್ತಿತ್ತು. ಮೇ ತಿಂಗಳಿನಲ್ಲಿ ಸರಾಸರಿ ನಾಲ್ಕು ಲಕ್ಷಕ್ಕಿಂತಲೂ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಮಂಗಳವಾರ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣ ಪತ್ತೆಯಾಗಿತ್ತು.

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 92,596 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 2,219 ಮಂದಿ ಸಾವನ್ನಪ್ಪಿದ್ದರು. ಜೂನ್ 08ರವರೆಗೆ 37,01,93,563 ಕೋವಿಡ್ ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ. ಇದರಲ್ಲಿ ಮಂಗಳವಾರ (ಜೂನ್ 08) 19,85,967 ಸ್ಯಾಂಪಲ್ಸ್ ಪರೀಕ್ಷಿಸಲಾಗಿತ್ತು ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next