Advertisement

ಭಾರತದಲ್ಲಿ 9,283 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

10:41 AM Nov 24, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 9,283 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,35,763ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ನವೆಂಬರ್ 24) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಗೋವಾ ಇಫಿ ಸಿನಿಮೋತ್ಸವದಲ್ಲಿ ಕನ್ನಡದ “ಡೊಳ್ಳು ಚಿತ್ರ”;ನಗರೀಕರಣ ಇಡೀ ಜಗತ್ತಿನ ಸಮಸ್ಯೆ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,11,481ಕ್ಕೆ ಇಳಿಕೆಯಾಗಿದೆ. ಇದು 537 ದಿನಗಳ ಕನಿಷ್ಠ ಸಂಖ್ಯೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ. 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 437 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,66,584ಕ್ಕೆ ತಲುಪಿದೆ.

47 ದಿನಗಳಿಂದ ದೇಶದಲ್ಲಿ ಸತತವಾಗಿ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. 150 ದಿನಗಳಿಂದ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ ಎಂದು ವರದಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next