Advertisement

ಭಾರತದಲ್ಲಿ 24ಗಂಟೆಯಲ್ಲಿ 9,923 ಕೋವಿಡ್ ಸೋಂಕು ಪ್ರಕರಣ ದೃಢ; 17 ಮಂದಿ ಸಾವು

10:36 AM Jun 21, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 9,923 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,19,396ಕ್ಕೆ ಏರಿಕೆಯಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜೂನ್ 21) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಪರಿಷತ್ ಚುನಾವಣೆ; ಬಿಜೆಪಿಗೆ 5 ಸ್ಥಾನಗಳಲ್ಲಿ ಜಯ, ಮಹಾ ವಿಕಾಸ್ ಅಘಾಡಿಗೆ ಮುಖಭಂಗ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 79,313ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 17 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,890ಕ್ಕೆ ತಲುಪಿದೆ.

ಕೋವಿಡ್ ನಿಂದ ದೆಹಲಿಯಲ್ಲಿ 6 ಮಂದಿ, ಕೇರಳದಲ್ಲಿ 5, ಮಹಾರಾಷ್ಟ್ರದಲ್ಲಿ 2, ಹಿಮಾಚಲ್ ಪ್ರದೇಶ, ಜಮ್ಮು-ಕಾಶ್ಮೀರ, ಪಶ್ಚಿಮ ಬಂಗಾಳ ಮತ್ತು ಉತ್ತರಪ್ರದೇಶದಲ್ಲಿ ತಲಾ ಒಬ್ಬರು ಸಾವನ್ನಪ್ಪಿರುವುದಾಗಿ ಅಂಕಿಅಂಶ ವಿವರಿಸಿದೆ.

24ಗಂಟೆಯಲ್ಲಿ 2,613 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.2.55ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.2.67ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next