Advertisement

ಹೆಚ್ಚುತ್ತಿರುವ ಕೋವಿಡ್ ನಾಲ್ಕನೇ ಅಲೆ ಭೀತಿ: ತಿಂಗಳಲ್ಲೇ ಅತಿ ಹೆಚ್ಚು ಪ್ರಕರಣಗಳ ವರದಿ

11:55 AM Jun 11, 2022 | Team Udayavani |

ನವದೆಹಲಿ:ಕೋವಿಡ್ ನಾಲ್ಕನೇ ಅಲೆ ಭೀತಿ ಹೆಚ್ಚುತ್ತಿದ್ದು, ಶನಿವಾರ (ಜೂನ್ 11), ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,329 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 10 ಸೋಂಕಿತರ ಸಾವುಗಳು ವರದಿಯಾಗಿವೆ.

Advertisement

ದೇಶದಲ್ಲಿ 40,370 ಸಕ್ರಿಯ ಪ್ರಕರಣಗಳಿದ್ದು, 4,216 ಮಂದಿ ಚೇತರಿಕೆ ಕಂಡಿದ್ದಾರೆ. ಶುಕ್ರವಾರ, ದೇಶದಲ್ಲಿ 7,584 ಪ್ರಕರಣಗಳು ಮತ್ತು 24 ಸಾವುಗಳು ವರದಿಯಾಗಿವೆ. ದೇಶದಲ್ಲಿ ದೈನಂದಿನ ಪ್ರಕರಣಗಳು 8000 ಪ್ರಕರಣಗಳ ಗಡಿಯನ್ನು ದಾಟಿದ್ದು, ಇದು ತಿಂಗಳಲ್ಲೇ ಭಾರತದ ಅತ್ಯಧಿಕ ಪ್ರಮಾಣವಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ರಾಜಧಾನಿ ದೆಹಲಿಯಲ್ಲಿ 655 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ, 2 ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಸಂಭವಿಸಿವೆ. ಮಹಾರಾಷ್ಟ್ರದಲ್ಲಿ ಶುಕ್ರವಾರ 3,081 ಹೊಸ ಸೋಂಕುಗಳು ದಾಖಲಾಗಿವೆ. ಪಶ್ಚಿಮ ಬಂಗಾಳದಲ್ಲಿ 107 ಪ್ರಕರಣಗಳು ದಾಖಲಾಗಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next