Advertisement

ಭಾರೀ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 70,421 ಕೋವಿಡ್ ಪ್ರಕರಣ ಪತ್ತೆ, 3921 ಸಾವು

10:10 AM Jun 14, 2021 | Team Udayavani |

ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಏರಿಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 70,421 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ 72 ದಿನಗಳಲ್ಲಿ ದಾಖಲಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ಸೋಮವಾರ(ಜೂನ್ 14) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ದ್ರಾವಿಡ್ ಜತೆ ಲಂಕಾ ಪ್ರವಾಸಕ್ಕೆ ಕೋಚ್ ಗಳಾಗಿ ದಿಲೀಪ್‌ ಮತ್ತು ಪಾರಸ್‌ ಮಾಂಬ್ರೆ ಆಯ್ಕೆ

ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 2,95,10,410ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಸೋಂಕಿನಿಂದ 3,921 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 3,74,305ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಕಳೆದ 72 ದಿನಗಳ ನಂತರ ದೇಶದಲ್ಲಿ 70,421 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 1,19,501 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next