Advertisement

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,815 ಕೋವಿಡ್ ಪ್ರಕರಣ ಪತ್ತೆ, 68 ಸಾವು

10:25 AM Aug 13, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,815 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 68 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಆಗಸ್ಟ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಗಾಳಿಪಟ-2 ಚಿತ್ರ ವಿಮರ್ಶೆ: ಹಾರಾಟದ ಹುಡುಗರ ಗೆಲುವಿನ ಹೋರಾಟ

ಒಂದೇ ದಿನದಲ್ಲಿ ದೇಶದಲ್ಲಿ 4,271 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,19,264ಕ್ಕೆ ತಲುಪಿರುವುದಾಗಿ ಅಂಕಿಅಂಶದಲ್ಲಿ ವಿವರಿಸಲಾಗಿದೆ.

ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ 68 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,996ಕ್ಕೆ ಏರಿಕೆಯಾಗಿದೆ. ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ಕೂಡಾ 4,42,39,372ಕ್ಕೆ ಹೆಚ್ಚಳವಾಗಿದೆ.

ದೇಶದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.54ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.36ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.79ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಒಟ್ಟು 4,35,93,112 ಮಂದಿ ಗುಣಮುಖರಾಗಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next