ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,912 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 38 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಸೆಪ್ಟೆಂಬರ್ 24) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಲಬುರಗಿ: ಗಾಂಜಾ ದಂಧೆಕೋರರಿಂದ ಸಿಪಿಐ- ಪೊಲೀಸರ ಮೇಲೆ ಮಾರಣಾಂತಿಕ ದಾಳಿ
ಶುಕ್ರವಾರ ದೇಶದಲ್ಲಿ 5,383 ಕೋವಿಡ್ ಪ್ರಕರಣಗಳು ಪತ್ತೆಯಾಗಿತ್ತು. ಒಂದೇ ದಿನದಲ್ಲಿ ಕೇರಳದ 19 ಸಾವು ಸೇರಿದಂತೆ ಭಾರತದಲ್ಲಿ 38 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದರು. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,487ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 44,436ಕ್ಕೆ ಇಳಿಕೆಯಾಗಿದೆ. ದೇಶದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.1.62ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.1.69ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
24ಗಂಟೆಯಲ್ಲಿ ದೇಶಾದ್ಯಂತ 3,03,888 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಒಂದೇ ದಿನದಲ್ಲಿ 5,719 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಭಾರತದಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,39,90,414 ಕೋಟಿಗೆ ಏರಿಕೆಯಾಗಿದೆ.
ಭಾರತದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.71ರಷ್ಟಿದೆ. ದೇಶದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 217.41 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ತಿಳಿಸಿದೆ.