ನವದೆಹಲಿ: ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 3,68,147 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,99.25,604ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಮೇ 03) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಮಧ್ಯೆಯೇ ಮದುವೆ : ನಿಯಮ ಪಾಲಿಸಲು ಈ ನವ ಜೋಡಿ ಮಾಡಿದ್ರು ನ್ಯೂ ಐಡಿಯಾ..!
ಭಾರತದಲ್ಲಿ ಕೋವಿಡ್ 2 ಕೋಟಿಗೆ ಸಮೀಪಿಸಿದೆ. ಇದರಲ್ಲಿ 34,13,642 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 24ಗಂಟೆಯಲ್ಲಿ 3,417 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 2,18,959ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಪಟ್ಟಿ ಮಾಡಿರುವ ಅತೀ ಹೆಚ್ಚು ಕೋವಿಡ್ ಪ್ರಕರಣಗಳ ರಾಜ್ಯಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಕೇರಳ, ರಾಜಸ್ಥಾನ್, ಗುಜರಾತ್, ಛತ್ತೀಸ್ ಗಢ್, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮಬಂಗಾಳ ಸೇರಿದೆ ಎಂದು ತಿಳಿಸಿದೆ.
ಭಾರತದಲ್ಲಿ ಕೋವಿಡ್ ರೂಪಾಂತರಿ ಎರಡನೇ ಅಲೆಯನ್ನು ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಭಾನುವಾರ ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ಸಲಹೆ ನೀಡಿದೆ. ಕೋವಿಡ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ದಾಖಲಾದ ವಿವಿಧ ಅರ್ಜಿಗಳ ವಿಚಾರಣೆ ವೇಳೆ ಈ ಆದೇಶ ನೀಡಿರುವುದಾಗಿ ಹೇಳಿದೆ.