ನವದೆಹಲಿ: ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ನಡುವೆಯೇ ಕಳೆದ 24 ಗಂಟೆಗಳಲ್ಲಿ 37,593 ಹೊಸ ಕೋವಿಡ್ ಪ್ರಕರಣ ಪತ್ತೆಯಾಗುವ ಮೂಲಕ ಹೆಚ್ಚಳವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಆಗಸ್ಟ್ 25) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ನಿಂದ ಸಂಕಷ್ಟದಲ್ಲಿರುವವರ ಸಹಾಯಕ್ಕಾಗಿ ‘ಪಿಕಲ್ಡ್ ವಿತ್ ಲವ್’ : 87ರ ಅಜ್ಜಿಯ ಉದ್ಯಮ
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 37,593 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 648 ಸಾವು ಸಂಭವಿಸಿದೆ. ಅಲ್ಲದೇ 24ಗಂಟೆಗಳಲ್ಲಿ 34,169 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿರುವುದಾಗಿ ಅಂಕಿಅಂಶದಲ್ಲಿ ಉಲ್ಲೇಖಿಸಲಾಗಿದೆ.
ಭಾರತದಲ್ಲಿ ಇದೀಗ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,22,327ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶದಲ್ಲಿ ಹೇಳಿದೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 3,25,12,366ಕ್ಕೆ ಹೆಚ್ಚಳವಾಗಿದೆ.
ಕೋವಿಡ್ ಸೋಂಕಿನಿಂದ ದೇಶಾದ್ಯಂತ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,35,758ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.97.67ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಕಳೆದ 24ಗಂಟೆಗಳಲ್ಲಿ 2,776 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.