Advertisement

ಭಾರತದಲ್ಲಿ 24ಗಂಟೆಯಲ್ಲಿ 2,067 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಮತ್ತೆ ಹೆಚ್ಚಳ

11:31 AM Apr 20, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,067 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,47,594ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಏಪ್ರಿಲ್ 20) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಶಾಂತಿಯುತ ರಾಜ್ಯದಲ್ಲಿ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ: ಈಶ್ವರಪ್ಪ

ಭಾರತದಲ್ಲಿ ಇದೀಗ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 12,340ಕ್ಕೆ ಏರಿಕೆ ಕಂಡಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿದೆ. 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 40 ಮಂದಿ ಸಾವನ್ನಪ್ಪಿದ್ದು, ಒಟ್ಟು ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,22,006ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 480 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.76ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.49ಕ್ಕೆ ಏರಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.0.38ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

ದೇಶಾದ್ಯಂತ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,13,248ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 186.90 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next