ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,313 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1.61ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಅಕ್ಟೋಬರ್ 30) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮಲೆ ಮಹದೇಶ್ವರನ ಹುಂಡಿಯಲ್ಲಿ 29 ದಿನಗಳಲ್ಲಿ 1.29ಕೋಟಿ ರೂ ಸಂಗ್ರಹ
ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 549 ಮಂದಿ ಸಾವನ್ನಪ್ಪಿದ್ದು, 13,453 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ 24ಗಂಟೆಗಳಲ್ಲಿ 221 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರಸ್ತುತ 1,61, 555ಕ್ಕೆ ಏರಿಕೆಯಾಗಿದೆ. ಇದು 2020ರ ಮಾರ್ಚ್ ಗೆ ಹೋಲಿಸಿದರೆ ಕನಿಷ್ಠ ಪ್ರಮಾಣದ್ದಾಗಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಒಂದು ತಿಂಗಳಿನಿಂದ ಕೋವಿಡ್ ಪ್ರಕರಣಗಳ ಸಂಖ್ಯೆ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದೆ. ದೇಶಾದ್ಯಂತ ಈವರೆಗೆ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3.36 ಕೋಟಿಗೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,57,740ಕ್ಕೆ ತಲುಪಿದೆ ಎಂದು ವರದಿ ಹೇಳಿದೆ.