Advertisement

ಭಾರತದಲ್ಲಿ 24ಗಂಟೆಯಲ್ಲಿ 15,528 ಕೋವಿಡ್ ಸೋಂಕು ಪ್ರಕರಣ ದೃಢ, ಸಕ್ರಿಯ ಪ್ರಕರಣ ಇಳಿಕೆ

12:44 PM Jul 19, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 15,528 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,37,83,062ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜುಲೈ 19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಚಿಕ್ಕಮ್ಮನ ಖಾಸಗಿ ದೃಶ್ಯ ಸೆರೆ ಹಿಡಿದು 25 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ‌, ಪ್ರಿಯಕರ ಬಂಧನ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,43,654ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ. ಮೇ 23ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಇಳಿಕೆಯಾಗಿದೆ.

ಕಳೆದ 24ಗಂಟೆಯಲ್ಲಿ 25 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,785ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.47ರಷ್ಟಿದೆ.

ಒಂದೇ ದಿನದಲ್ಲಿ 610 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಪ್ರತಿದಿನದ ಪಾಸಿಟಿವಿಟಿ ದರ ಶೇ.3.32ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.4.57ರಷ್ಟಿದೆ ಎಂದು ಸಚಿವಾಲಯ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next