Advertisement

ದೇಶದಲ್ಲಿಂದು 3,11,170 ಕೋವಿಡ್ ಪಾಸಿಟಿವ್, 3,62,437 ಮಂದಿ ಡಿಸ್ಚಾರ್ಜ್

10:51 AM May 16, 2021 | Team Udayavani |

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,11,170 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ,. ಅಲ್ಲದೆ ಸೋಂಕಿನಿಂದ, 4,077 ಮಂದಿ ಮೃತಪಟ್ಟಿದ್ದಾರೆ.  ಇನ್ನು 3,62,437 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಪಾಸಿಟಿವ್ ಆದವರಿಗಿಂತ ಇಂದು ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಿದೆ.

Advertisement

ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿಗೊಳಗಾದವರ ಒಟ್ಟು ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,07,95,335ಕ್ಕೆ ಏರಿಕೆಯಾಗಿದೆ.

ಒಟ್ಟು 2,70,284 ಮಂದಿ ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದಂತಾಗಿದೆ. ದೇಶದಲ್ಲಿ ಸದ್ಯ 36,18,458 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next