ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 5,233 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ಒಂದೇ ದಿನದಲ್ಲಿ ಸುಮಾರು ಶೇ.41ರಷ್ಟು ಕೋವಿಡ್ ಪ್ರಕರಣದಲ್ಲಿ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಜೂನ್ 08) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ವಿಧಾನಸಭೆಗೆ ವಿಜಯೇಂದ್ರ ಸ್ಪರ್ಧೆ ಖಚಿತ: ಸಾಮೂಹಿಕ ನಾಯಕತ್ವದಲ್ಲಿ ಪ್ರಚಾರ: ಬಿಎಸ್‌ವೈ
ಹಲವಾರು ರಾಜ್ಯಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ 1,881 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಫೆಬ್ರವರಿ 18ರ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಶೇ.81ರಷ್ಟು ಸೋಂಕು ಪ್ರಕರಣ ಏರಿಕೆಯಾಗಿದೆ.
ರಾಜಧಾನಿ ಮುಂಬಯಿಯಲ್ಲಿಯೇ 1,242 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದು ಸೋಮವಾರ ವರದಿಯಾದ ಸಂಖ್ಯೆಗಿಂತ ದುಪ್ಪಟ್ಟಾಗಿದೆ ಎಂದು ಅಂಕಿ-ಅಂಶದಲ್ಲಿ ತಿಳಿಸಿದೆ. ಆದರೆ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿಂದ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.
ಭಾರತದಲ್ಲಿ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 3,714 ಮಂದಿ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ ದೇಶಾದ್ಯಂತ ಕೋವಿಡ್ ನಿಂದ 7 ಮಂದಿ ಸಾವನ್ನಪ್ಪಿದ್ದಾರೆ. 24ಗಂಟೆಯಲ್ಲಿ 3,345 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 28,857ಕ್ಕೆ ಏರಿಕೆಯಾಗಿದೆ.