ಹೊಸದಿಲ್ಲಿ: ದೇಶದಲ್ಲಿ ಮತ್ತೆ ಹೊಸ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ದೇಶದಲ್ಲಿ ಕೇವಲ ಒಂದು ದಿನದಲ್ಲಿ 17,073 ಪ್ರಕರಣಗಳು ಪತ್ತೆಯಾಗಿದೆ. ಒಂದೇ ದಿನ ಶೇಕಡಾ 45 ರಷ್ಟು ಕೋವಿಡ್ ಪ್ರಕರಣಗಳು ಹೆಚ್ಚಾಗಿದೆ.
17,073 ಹೊಸ ಪ್ರಕರಣಗಳೊಂದಿಗೆ ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,34,07,046ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ರವಿವಾರ ಒಂದು ದಿನದಲ್ಲಿ 21 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 5,25,020 ಗೆ ಏರಿಕೆಯಾಗಿದೆ.
ಇದನ್ನೂ ಓದಿ:ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ
ರಾಷ್ಟ್ರೀಯ ಆರೋಗ್ಯ ಇಲಾಖೆಯ ಪ್ರಕಾರ ದೇಶದಲ್ಲಿ ರಿಕವರಿ ರೇಟ್ ಸದ್ಯ 98.57 ರಷ್ಟಿದೆ. ದೇಶದಲ್ಲಿ ದೈನಂದಿನ ಪಾಸಿಟಿವಿಟಿ ದರವು ಶೇಕಡಾ 5.62 ರಷ್ಟಿದ್ದರೆ ವಾರದ ಪಾಸಿಟಿವಿಟಿ ದರವು ಶೇಕಡಾ 3.39 ರಷ್ಟಿದೆ ಎಂದು ಇಲಾಖೆ ಹೇಳಿದೆ.
ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,27,87,606 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.21 ರಷ್ಟಿದೆ.