ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,628 ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, 617 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಆಗಸ್ಟ್ 07) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಒಲಿಂಪಿಕ್ ಗಾಲ್ಫ್ ನಲ್ಲಿ ಮಿಂಚು ಹರಿಸಿದ ಕನ್ನಡತಿ: ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟ ಅದಿತಿ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,12,153ಕ್ಕೆ ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 617 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,27,371ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 40,017 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 3,18,95,385ಕ್ಕೆ ಏರಿಕೆಯಾಗಿದೆ. ಶುಕ್ರವಾರ 4,14,159 ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಶನಿವಾರ 4,27,371 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ವರದಿಯಾಗಿದೆ.
ಕಳೆದ 41 ದಿನಗಳಲ್ಲಿ 50,000ಕ್ಕಿಂತ ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ವಾರದ ಪಾಸಿಟಿವಿಟಿ ದರ 2.39ರಷ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.2.21ರಷ್ಟಿದೆ ಎಂದು ವರದಿ ತಿಳಿಸಿದೆ.