ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,866 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 4,38,05,621ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜುಲೈ 25) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬುರ್ಖಾ ಧರಿಸಿ ಆಲಮಟ್ಟಿ ಜಲಾಶಯಕ್ಕೆ ನುಗ್ಗಲು ಯತ್ನ: ಹಾಸನ ಮೂಲದ ಯುವಕ ಪೊಲೀಸ್ ವಶಕ್ಕೆ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,50,877ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 41 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,074ಕ್ಕೆ ತಲುಪಿದೆ.
ಒಂದು ದಿನದಲ್ಲಿ 1,323 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 24ಗಂಟೆಯಲ್ಲಿ 18,148 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,32,28,670ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.46ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.7.03ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.49ರಷ್ಟಿದೆ ಎಂದು ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ವಿವರಿಸಿದೆ.