Advertisement

ಭಾರೀ ಇಳಿಕೆ: ಭಾರತದಲ್ಲಿ 24 ಗಂಟೆಯಲ್ಲಿ 16,069 ಕೋವಿಡ್ ಪ್ರಕರಣ ಪತ್ತೆ, 51 ಜನರು ಸಾವು

11:17 AM Jul 18, 2022 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ ನಾಲ್ಕನೇ ಅಲೆಯ ಭೀತಿಯ ನಡುವೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ. ಕಳೆದ 24ಗಂಟೆಯಲ್ಲಿ 16,069 ಕೋವಿಡ್ ಪ್ರಕರಣ ದೃಢಪಟ್ಟಿದ್ದು, 51 ಸೋಂಕಿತರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜುಲೈ 18) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ರಾಯಚೂರು: ಕಾರು -ಲಾರಿ ಮುಖಾಮುಖಿ ಢಿಕ್ಕಿ; ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,44,264ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಈವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,760ಕ್ಕೆ ತಲುಪಿರುವುದಾಗಿ ಸಚಿವಾಲಯ ಹೇಳಿದೆ.

ಒಂದೇ ದಿನದಲ್ಲಿ 16,935 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,30,97,510ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.

24ಗಂಟೆಯಲ್ಲಿ 815 ಸಕ್ರಿಯ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ. ಭಾರತದ ಕೋವಿಡ್ 19 ಚೇತರಿಕೆ ಪ್ರಮಾಣ 98.47ರಷ್ಟಿದೆ. ದೇಶಾದ್ಯಂತದ ಕೋವಿಡ್ 19 ಲಸಿಕೆ ಅಭಿಯಾನದಡಿ ಈವರೆಗೆ 200 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next