Advertisement

58 ದಿನಗಳಲ್ಲಿ ಭಾರೀ ಇಳಿಕೆ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1.2ಲಕ್ಷ ಕೋವಿಡ್ ಪ್ರಕರಣ ಪತ್ತೆ

10:25 AM Jun 05, 2021 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆ ಮುಂದುವರಿದಿದ್ದು, ಕಳೆದ 24ಗಂಟೆಗಳಲ್ಲಿ 1,20,529 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 58 ದಿನಗಳಲ್ಲಿ ವರದಿಯಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜೂನ್ 05) ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ: ಸರ್ಕಾರದ ವಿರುದ್ಧ ಎಚ್ ಡಿಕೆ ಕಿಡಿ

ಕಳೆದ 24ಗಂಟೆಗಳಲ್ಲಿ 1,20,529 ಕೋವಿಡ್ 19 ಪ್ರಕರಣ ವರದಿಯಾಗಿದ್ದು, 3,380 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿನ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15.55 ಲಕ್ಷಕ್ಕೆ ಇಳಿಕೆಯಾಗಿದೆ.

ಭಾರತದಲ್ಲಿ ಕೋವಿಡ್ ಸೋಂಕಿನಿಂದ ಈವರೆಗೆ 2.67 ಕೋಟಿ ಜನರು ಗುಣಮುಖರಾಗಿದ್ದಾರೆ. ಅಲ್ಲದೇ ಕಳೆದ 24ಗಂಟೆಗಳಲ್ಲಿ 1,97,894 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 22.78 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ತಮಿಳುನಾಡಿನಲ್ಲಿ 22,651 ಕೋವಿಡ್ ಪ್ರಕರಣ, ಕೇರಳದಲ್ಲಿ 16,229, ಕರ್ನಾಟಕದಲ್ಲಿ 16,068, ಮಹಾರಾಷ್ಟ್ರದಲ್ಲಿ 14,152 ಹಾಗೂ ಆಂಧ್ರಪ್ರದೇಶದಲ್ಲಿ 10,413 ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next