ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 18,819 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುವ ಮೂಲಕ ಭಾರೀ ಹೆಚ್ಚಳ ಕಂಡಂತಾಗಿದೆ. ಕೋವಿಡ್ ನಿಂದ 39 ಜನರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜೂನ್ 30) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಭಾರಿ ಮಳೆ: ಮಂಗಳೂರು ವಿ.ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿ ಬಿರುಕು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,04,555ರ ಗಡಿ ದಾಟಿದೆ. ಒಂದೇ ದಿನದಲ್ಲಿ 13,827 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,116ಕ್ಕೆ ಏರಿಕೆಯಾಗಿದೆ.
ಕೇವಲ ಒಂದೇ ದಿನದಲ್ಲಿ ದೇಶದಲ್ಲಿ 4,000 ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಬುಧವಾರ ಭಾರತದಲ್ಲಿ 14,506 ಕೋವಿಡ್ ಸೋಂಕು ಪ್ರಕರಣ ವರದಿಯಾಗಿತ್ತು. ದೇಶಾದ್ಯಂತ ಈವರೆಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,33,345ಕ್ಕೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ತಿಳಿಸಿದೆ.
Related Articles
ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.56ರಷ್ಟಿದೆ. ಒಂದೇ ದಿನದಲ್ಲಿ 2,902 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವಾಲಯದ ಅಂಕಿಅಂಶ ವಿವರಿಸಿದೆ.