Advertisement

ಭಾರತದಲ್ಲಿ 24ಗಂಟೆಯಲ್ಲಿ 3,712 ಕೋವಿಡ್ ಸೋಂಕು ಪ್ರಕರಣ ದೃಢ, 14 ಮಂದಿ ಸಾವು

10:34 AM Jun 02, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,712 ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ 19 ಪ್ರಕರಣಗಳ ಒಟ್ಟು ಸಂಖ್ಯೆ 4,31,64,544ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜೂನ್ 02) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಎರಡನೇ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ನಲ್ಲೇ ಆಗ್ರಹ: ನಾಳೆ ನಾಮಪತ್ರ ವಾಪಾಸ್?

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 19,509ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ 19 ಸೋಂಕಿನಿಂದ 14 ಮಂದಿ ಸಾವನ್ನಪ್ಪಿರುವುದಾಗಿ ಸಚಿವಾಲಯ ಹೇಳಿದೆ.

ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 2,584 ಮಂದಿ ಗುಣಮುಖರಾಗಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಒಟ್ಟು 4,26,20,394 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಅಂಕಿ-ಅಂಶ ವಿವರಿಸಿದೆ.

24ಗಂಟೆಯಲ್ಲಿ 1,123 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವ್ ದರ ಶೇ.0.84ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.67ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Advertisement

ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 193.70 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೇಶಾದ್ಯಂತ ಒಂದೇ ದಿನದಲ್ಲಿ 4,41,989 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next