Advertisement

ಭಾರೀ ವೇಗ ಪಡೆದ ಕೋವಿಡ್: 24 ಗಂಟೆಯಲ್ಲಿ 90 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣ ಪತ್ತೆ!

09:54 AM Jan 06, 2022 | Team Udayavani |

ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 90,928 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಬುಧವಾರ ವರದಿಯಾದ ಪ್ರಕರಣಗಳಿಗಿಂತ 56.5% ರಷ್ಟು ಸೋಂಕು ಪ್ರಕರಣಗಳು ಹೆಚ್ಚಾಗಿದೆ.

Advertisement

ದೇಶದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,51,09,286 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 325 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 4,82,876 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಮಾಣದ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 26538 ಪ್ರಕರಣಗಳು ವರದಿಯಾಗಿದೆ. ಪಶ್ಚಿಮ ಬಂಗಾಳದಲಲ್ಇ 14,022 ಸೋಂಕು ಪ್ರಕರಣಗಳು, ದಿಲ್ಲಿಯಲ್ಲಿ 10,665 ಪ್ರಕರಣಗಳು, ತಮಿಳುನಾಡಿನಲ್ಲಿ 4,862 ಸೋಂಕು ಪ್ರಕರಣಗಳು ಮತ್ತು ಕೇರಳ ರಾಜ್ಯದಲ್ಲಿ 4,801 ಪ್ರಕರಣಗಳು ವರದಿಯಾಗಿದೆ.

ಇದನ್ನೂ ಓದಿ:ಕೇರಳ, ಮಹಾರಾಷ್ಟ್ರ, ಗೋವಾ ಪ್ರಯಾಣಿಕರು ಈ ನಿಯಮಗಳನ್ನು ಪಾಲಿಸಬೇಕು

ದೇಶದಲ್ಲಿ ಇದುವರೆಗೆ 3,43,41,009 ಮಂದಿ ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 2,85,401 ಸಕ್ರಿಯ ಸೋಂಕು ಪ್ರಕರಣಗಳಿವೆ.

Advertisement

ಕರ್ನಾಟಕದಲ್ಲೂ ಹೆಚ್ಚಳ: ದೆಹಲಿ, ಮಹಾರಾಷ್ಟ್ರ, ಬಂಗಾಳದ ಜತೆಗೆ ಕರ್ನಾಟಕ, ಕೇರಳ, ತಮಿಳುನಾಡು, ಜಾರ್ಖಂಡ್‌ ಮತ್ತು ಗುಜರಾತ್‌ನಲ್ಲಿ ಭಾರೀ ಪ್ರಮಾಣ ದಲ್ಲಿ ಕೊರೊನಾ ಏರಿಕೆಯಾಗಿದೆ. ಒಟ್ಟು 6 ರಾಜ್ಯಗಳಲ್ಲಿ 10 ಸಾವಿರಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳು ಇವೆ.

ಇದಕ್ಕೆ ಪೂರಕವೆಂಬಂತೆ, ಬುಧವಾರ ಕರ್ನಾಟಕದಲ್ಲಿ 4,246 ಪ್ರಕರಣ ಮತ್ತು ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.3.33ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೇಸುಗಳ ಸಂಖ್ಯೆಯೂ 17,414ಕ್ಕೆ ತಲುಪಿದೆ. ವಿಚಿತ್ರವೆಂದರೆ, ಬೆಂಗಳೂರಿನಲ್ಲೇ 3,605 ಪ್ರಕರಣ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಬಿಟ್ಟರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 111 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಶೇ.6.45 ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next