Advertisement

ಶನಿವಾರದ ಕೋವಿಡ್ ವರದಿ : ದೇಶದಲ್ಲಿ 4,187 ಮಂದಿ ಸಾವು, 4 ಲಕ್ಷಕ್ಕೂ ಅಧಿಕ ಪ್ರಕರಣ

10:40 AM May 08, 2021 | Team Udayavani |

ನವದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಹಲವು ರಾಜ್ಯಗಳು ಈಗಾಗಲೆ ಲಾಕ್ ಡೌನ್ ಘೋಷಣೆ ಮಾಡಿವೆ.  ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಸೋಂಕಿತರ ವರದಿಯನ್ನು ಬಿಡುಗಡೆ ಮಾಡಿದ್ದು, 4 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ 4,187 ಮಂದಿ ಕಳೆದ 24 ಗಂಟೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Advertisement

ಶನಿವಾರದ ವರದಿ ಪ್ರಕಾರ 4,01,078 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ಗುರುವಾರ 4.12 ಲಕ್ಷ ಮತ್ತು ಶುಕ್ರವಾರ 4.14 ಲಕ್ಷ ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು.

ಕಳೆದ 24 ಗಂಟೆಗಳಲ್ಲಿ ಒಟ್ಟು 3,18,609 ಕೋವಿಡ್ -19 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 1,79,30,960 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next