ನವದೆಹಲಿ:ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗತೊಡಗಿದ್ದು, ಕಳೆದ 24ಗಂಟೆಯಲ್ಲಿ 2,09,918 ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜನವರಿ 31) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಜನರ ಮೇಲೆ ಹರಿದ ಎಲೆಕ್ಟ್ರಿಕ್ ಬಸ್: 6 ಮಂದಿ ದುರ್ಮರಣ, ಹಲವರಿಗೆ ಗಾಯ
ದೇಶದಲ್ಲಿ 24ಗಂಟೆಯಲ್ಲಿ 2,62,628 ಮಂದಿ ಗುಣಮುಖರಾಗಿದ್ದು, ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡಿರುವವರ ಸಂಖ್ಯೆ 3,89,76,122ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಒಂದೇ ದಿನ 959 ಮಂದಿ ಸಾವನ್ನಪ್ಪಿದ್ದು, ಒಟ್ಟು ಈವರೆಗೆ 4,59,050ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18,31,268ಕ್ಕೆ ಇಳಿಕೆಯಾಗಿದೆ. ಸಚಿವಾಲಯದ ಮಾಹಿತಿ ಪ್ರಕಾರ, ದಿನಂಪ್ರತಿಯ ಪಾಸಿಟಿವಿಟಿ ದರ ಶೇ.15.77ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.15.75ರಷ್ಟಿದೆ ಎಂದು ತಿಳಿಸಿದೆ.
ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ಸು ಕಂಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದು, ಈವರೆಗೆ ದೇಶದಲ್ಲಿ ನಾಲ್ಕುವರೆ ಕೋಟಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.