ನವದೆಹಲಿ:ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಶುಕ್ರವಾರ(ಮೇ 14) ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ 3, 43, 144 ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ
ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿ ಅಂಶದ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3, 43,144 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,000 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 3,44,776 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.
ಗುರುವಾರ 3,62,727 ಕೋವಿಡ್ ಹೊಸ ಪ್ರಕರಣ ವರದಿಯಾಗಿತ್ತು. ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣ ಒಟ್ಟು 2,40,46,809ಕ್ಕೆ ಏರಿಕೆಯಾಗಿದೆ. ಪ್ರಸ್ತುತ 37 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಎರಡನೇ ಅಲೆ ಸೋಂಕು ಪ್ರಾರಂಭವಾದ ದಿನದಿಂದ ಈವರೆಗೆ ಒಟ್ಟು 2.40 ಕೋಟಿ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 2 ಕೋಟಿಗೂ ಅಧಿಕ ಮಂದಿ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಈವರೆಗೆ 31,13,24,100 ಮಂದಿಯನ್ನು ಕೋವಿಡ್ 19 ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್). ಇದರಲ್ಲಿ ಗುರುವಾರ 18,75,515 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ವರದಿ ಹೇಳಿದೆ.