Advertisement

ಮತ್ತೆ ಹೆಚ್ಚಿದ ಕೋವಿಡ್ ಪ್ರಕರಣಗಳ ಸಂಖ್ಯೆ; 24 ಗಂಟೆಯಲ್ಲಿ 2593 ಹೊಸ ಕೇಸ್ ಪತ್ತೆ

12:09 PM Apr 24, 2022 | Team Udayavani |

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚುತ್ತಿದೆ. ದೇಶದಲ್ಲಿ ನಾಲ್ಕನೇ ಅಲೆಯ ಭೀತಿ ಎದುರಾಗಿದ್ದು, ಮತ್ತೆ ದಿನಂಪ್ರತಿ ಕೋವಿಡ್ ಸೋಂಕುಗಳ ಸಂಖ್ಯೆ ಎರಡು ಸಾವಿರ ದಾಟಿದೆ.

Advertisement

ರಾಷ್ಟ್ರೀಯ ಆರೋಗ್ಯ ಇಲಾಖೆ ನೀಡಿದ ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2593 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಕಳೆದ ಐದು ದಿನಗಳಿಂದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟುತ್ತಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ 44 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5,22,193ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 15,873 ಸಕ್ರಿಯ ಸೋಂಕು ಪ್ರಕರಣಗಳಿವೆ. ದೇಶದ ದೈನಂದಿನ ಪಾಸಿಟಿವಿಟಿ ದರ ಶೇ. 0.56ರಲ್ಲಿದೆ.

ಇದನ್ನೂ ಓದಿ:ಕಠಿಣ ಕ್ರಮದ ವಿಚಾರದಲ್ಲಿ ಕರ್ನಾಟಕವೇ ಮಾದರಿಯಾಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ

ಕಳೆದ 24 ಗಂಟೆಗಳಲ್ಲಿ ಒಟ್ಟು 1,755 ಸೋಂಕಿತರು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,25,19,479 ಕ್ಕೆ ತಲುಪಿದೆ.

Advertisement

ಮೋದಿ ಸಭೆ: ನವದೆಹಲಿ: ದೇಶದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಪ್ರಧಾನಿ ಮೋದಿ ಅವರು, ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಈ ಸಭೆ ನಡೆಯಲಿದ್ದು, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಅವರು ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಶನಿವಾರ ದೇಶದಲ್ಲಿ 2,527 ಮಂದಿಗೆ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15 ಸಾವಿರಕ್ಕೆ ಏರಿಕೆಯಾಗಿದೆ. ಹೀಗಾಗಿ, ಯಾವ ರೀತಿ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಪ್ರಧಾನಿ ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next