Advertisement

ಭಾರತದಲ್ಲಿ ಕೋವಿಡ್ ಪ್ರಕರಣ ಅಲ್ಪ ಹೆಚ್ಚಳ; 24 ಗಂಟೆಯಲ್ಲಿ 1,335 ಪ್ರಕರಣ ಪತ್ತೆ

10:58 AM Apr 01, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,335 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 52 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಏಪ್ರಿಲ್ 01) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ದರ 250 ರೂಪಾಯಿ ಹೆಚ್ಚಳ, ಜೆಟ್ ಇಂಧನ ಬೆಲೆ ಏರಿಕೆ

ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,25,775ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,181ಕ್ಕೆ ತಲುಪಿದೆ ಎಂದು ವರದಿ ಹೇಳಿದೆ.

ಕಳೆದ 24ಗಂಟೆಯಲ್ಲಿ 1,918 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,24,90,922ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 635 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next