Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,549 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.98

11:22 AM Nov 26, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,549 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 488 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ನವೆಂಬರ್ 26) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಸಂಗೀತ ಆಲಿಸಲು ಉತ್ತಮ ಆಯ್ಕೆ ಒನ್‍ಪ್ಲಸ್‍ ಬಡ್ಸ್ ಪ್ರೊ: ಏನಿದರ ವಿಶೇಷತೆ? ಬೆಲೆ ಎಷ್ಟು?

ಒಂದೇ ದಿನದಲ್ಲಿ 9,868 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,55,431ಕ್ಕೆ ತಲುಪಿದೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,67,468ಕ್ಕೆ ಏರಿಕೆಯಾಗಿದೆ.

ಕಳೆದ 24ಗಂಟೆಗಳಲ್ಲಿ 193 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇದರೊಂದಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 1,10,133ಕ್ಕೆ ತಲುಪಿದೆ ಎಂದು ಅಂಕಿಅಂಶ ಹೇಳಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.33ರಷ್ಟಿದೆ. ಗುರುವಾರ 9,119 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 396 ಮಂದಿ ಸಾವನ್ನಪ್ಪಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next