ಹೊಸದಿಲ್ಲಿ: ಸತತ ಇಳಿಮುಖ ಕಾಣುತ್ತಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇದೀಗ ತುಸು ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 48,786 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ, ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 61,588 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 5,23,257 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದ ರಿಕವರಿ ರೇಟ್ 96.97 ಇದೆ.
ಈ ಅವಧಿಯಲ್ಲಿ ದೇಶದಲ್ಲಿ 1005 ಮಂದಿ ಕೋವಿಡ್ ಸೋಂಕಿತರು ಮರಣ ಹೊಂದಿದ್ದಾರೆ. ಉತ್ತರಾಖಂಡ್ ರಾಜ್ಯದಲ್ಲಿ ಹೆಚ್ಚಿನ ಸಾವು ಸಂಭವಿಸಿದೆ (221). ಕೇರಳ ರಾಜ್ಯದಲ್ಲಿ 142 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಕೋವಿಡ್ 19: ಜುಲೈ 16ರವರೆಗೂ ರಾಜ್ಯದಲ್ಲಿ ಭಾಗಶಃ ಲಾಕ್ ಡೌನ್ ವಿಸ್ತರಣೆ: ಒಡಿಶಾ ಸರ್ಕಾರ
ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡು ಬರುತ್ತಿದೆ. ದಕ್ಷಿಣದ ಈ ರಾಜ್ಯದಲ್ಲಿ 13,658 ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ. ಮಹಾರಾಷ್ಟ್ರದಲ್ಲಿ 9771 ಮಂದಿಗೆ, ತಮಿಳುನಾಡಿನಲ್ಲಿ 4506 ಮಂದಿಗೆ ಕೋವಿಡ್ ದೃಢವಾಗಿದೆ. ಆಂಧ್ರ ಪ್ರದೇಶದಲ್ಲಿ 3797 ಮತ್ತು ಕರ್ನಾಟಕದಲ್ಲಿ 3382 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.