Advertisement

ಭಾರತದಲ್ಲಿ 24ಗಂಟೆಗಳ ಅವಧಿಯಲ್ಲಿ 13,313 ಕೋವಿಡ್ ಪ್ರಕರಣ ದೃಢ, 38 ಮಂದಿ ಸಾವು

11:45 AM Jun 23, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,313 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 38 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜೂನ್ 23) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಸಾವು

ಬುಧವಾರ ದೇಶದಲ್ಲಿ 12,249 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದವು. ಸಚಿವಾಲಯದ ಮಾಹಿತಿ ಪ್ರಕಾರ ಒಂದೇ ದಿನದಲ್ಲಿ 10,972 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ ಒಟ್ಟು 4,27,36,027 ಮಂದಿ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 83,990ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.2.03ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.2.81ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.

24ಗಂಟೆಯಲ್ಲಿ 6,56,410 ಮಂದಿಯನ್ನು ಪರೀಕ್ಷಿಸಲಾಗಿದ್ದು, ಈವರೆಗೆ ದೇಶಾದ್ಯಂತ ಸುಮಾರು 85.84 ಕೋಟಿ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 196.62 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next