Advertisement

ಹೊಸ ದಾಖಲೆ ಬರೆದ ಭಾರತ; ಒಂದೇ ದಿನದಲ್ಲಿ 20.61 ಲಕ್ಷ ಕೋವಿಡ್ 19 ಪರೀಕ್ಷೆ

06:04 PM May 21, 2021 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪತ್ತೆಗಾಗಿ ಕಳೆದ 24ಗಂಟೆಗಳಲ್ಲಿ 20.61ಲಕ್ಷಕ್ಕೂ ಅಧಿಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ದೇಶದಲ್ಲಿ ಈವರೆಗೆ ಒಂದೇ ದಿನದಲ್ಲಿ ನಡೆಸಿದ ಅತೀ ಹೆಚ್ಚು ಪರೀಕ್ಷೆಯಾಗಿದೆ. ಅಲ್ಲದೇ ದಿನದ ಪಾಸಿಟಿವ್ ರೇಟ್ 12.59ಕ್ಕೆ ಇಳಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಮೇ 21) ತಿಳಿಸಿದೆ.

Advertisement

ದೇಶದಲ್ಲಿ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 3,57,295 ಮಂದಿ ಚೇತರಿಸಿಕೊಂಡಿರುವುದಾಗಿ ವಿವರಿಸಿದೆ.

ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,27,12,735ಕ್ಕೆ ಏರಿಕೆಯಾಗಿದೆ. ಐಸಿಎಂಆರ್(ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ಮಾಹಿತಿ ಪ್ರಕಾರ ಮೇ 20ರವರೆಗೆ 32,44,17,870 ಕೋವಿಡ್ ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ. ಇದರಲ್ಲಿ ಗುರುವಾರ ಒಂದೇ ದಿನ 20,61,683 ಕೋವಿಡ್ ಸ್ಯಾಂಪಲ್ಸ್ ಪರೀಕ್ಷೆ ನಡೆಸಲಾಗಿದೆ.

ದೇಶದಲ್ಲಿ ಕಳೆದ ಐದು ದಿನಗಳಿಂದ 3 ಲಕ್ಷಕ್ಕಿಂತ ಕಡಿಮೆ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ. ತಮಿಳುನಾಡು, ಕೇರಳ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಪಶ್ಚಿಮಬಂಗಾಳ, ರಾಜಸ್ಥಾನ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಶೇ.76.66ರಷ್ಟು ಪ್ರಕರಣ ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next