ನವದೆಹಲಿ: ಕೆಲವು ದೇಶಗಳೇ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಮತ್ತು ಸೂಪರ್ ಪವರ್‌ಗಳು ಎಂಬ ಶ್ರೇಯಾಂಕ ವ್ಯವಸ್ಥೆಯಲ್ಲಿ ಭಾರತ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಾಚೀನ ಕಾಲದಲ್ಲಿ ನಮ್ಮ ದೇಶ ಹೊಂದಿದ್ದ ಮಾನವೀಯ ಭಾವನೆಗಳು ಮತ್ತು ಸಮಾನತೆಯ ತತ್ವಗಳನ್ನು ಆಧರಿಸಿದ ನಿಲುವುಗಳನ್ನು ಭಾರತ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಒಟ್ಟಾರೆ ಮಾನವ ಜಗತ್ತಿನ ಭದ್ರತೆ ಮತ್ತು ಅಭಿವೃದ್ಧಿಯನ್ನು ಕೇಂದ್ರೀಕರಿಸಿಕೊಂಡು ಏಕೀಕೃತವಾಗಿ ಇರುವ ಭದ್ರತಾ ವ್ಯವಸ್ಥೆಯ ಬಗ್ಗೆ ಭಾರತ ಸರ್ಕಾರ ತನ್ನದೇ ಆದ ಪರಿಕಲ್ಪನೆ ಹೊಂದಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಇತರರ ಕಾರಣದಿಂದ ಬಲಿಷ್ಠ, ಸಮೃದ್ಧ ಭಾರತದ ನಿರ್ಮಾಣವನ್ನು ಬಯಸುವುದಿಲ್ಲ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.