Advertisement
ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಹಿಂದೆ ಭಾರತ ಸರ್ಕಾರದ ಏಜೆಂಟ್ಗಳ ಕೈವಾಡ ಇದೆ ಎಂದು ಕೆನಡಾ ಆರೋಪಿಸಿದ ಬಳಿಕ ಉಂಟಾದ ರಾಜತಾಂತ್ರಿಕ ಬಿಕ್ಕಟ್ಟು ಸದ್ಯ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ ಕೆನಡಾ ನೀಡಿರುವ ಹೇಳಿಕೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಭಾರತ ಅಕ್ಟೋಬರ್ 10 ರೊಳಗೆ ಭಾರತದಲ್ಲಿರುವ 40 ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕಳುಹಿಸಬೇಕು ಎಂದು ಒಟ್ಟಾವಾಗೆ ತಿಳಿಸಿದೆ. ಈ ಹೇಳಿಕೆಯ ಬೆನ್ನಲ್ಲೇ ಕೆನಡಾ ಭಾರತ ತಮ್ಮ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದೆ.
Related Articles
Advertisement
ಕಳೆದ ವಾರ ವಾಷಿಂಗ್ಟನ್ ಡಿಸಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ , ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯು “ನಮ್ಮ ನೀತಿಗೆ ಅನುಗುಣವಾಗಿಲ್ಲ” ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ಸ್ವತಂತ್ರ ರಾಜ್ಯವನ್ನು ಬಯಸುತ್ತಿರುವ ಖಲಿಸ್ತಾನಿ ಪರ ಅಂಶಗಳಲ್ಲಿ ಕೆನಡಾ ತೊಡಗಿಸಿಕೊಂಡಿದೆ ಎಂದು ಅವರು ಆರೋಪಿಸಿದರು. ಇದಲ್ಲದೆ, ನಿಜ್ಜರ್ ಹತ್ಯೆಯಲ್ಲಿ ಭಾರತವು ಭಾಗಿಯಾಗಿದೆ ಎಂದು ಟ್ರೂಡೊ ಆರೋಪಿಸಿದ ನಂತರ ಭಾರತವು ಕೆನಡಾಕ್ಕೆ ತನ್ನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕೆನಡಾದಲ್ಲಿ “ಬೆಳೆಯುತ್ತಿರುವ ಭಾರತ-ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯವಾಗಿ ಮನ್ನಣೆ ಪಡೆದ ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರ” ದ ಹಿನ್ನೆಲೆಯಲ್ಲಿ ಭಾರತವು ತನ್ನ ನಾಗರಿಕರಿಗೆ ಮತ್ತು ಕೆನಡಾಕ್ಕೆ ಪ್ರಯಾಣಿಸುವವರಿಗೆ ಹೆಚ್ಚಿನ ಎಚ್ಚರಿಕೆಯನ್ನು ನೀಡುವಂತೆ ಸಲಹೆಯನ್ನು ನೀಡಿದೆ.
ಇದನ್ನೂ ಓದಿ: Child Marriage: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ… 800 ಕ್ಕೂ ಹೆಚ್ಚು ಮಂದಿ ಬಂಧನ