Advertisement

ಸು.ಕೋರ್ಟ್ ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರಾ ಕರ್ನಾಟಕದ ಬಿ.ವಿ.ನಾಗರತ್ನ?

09:14 AM Aug 26, 2021 | Team Udayavani |

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಶಿಫಾರಸು ಮಾಡಲಾದ ಎಲ್ಲಾ ಒಂಬತ್ತು ಹೆಸರುಗಳನ್ನು ಕೇಂದ್ರ ಅನುಮೋದಿಸಿದೆ. ಮೂವರು ಮಹಿಳಾ ನ್ಯಾಯಾಧೀಶರನ್ನು ಒಳಗೊಂಡ ಒಂಬತ್ತು ಮಂದಿಯ ಪಟ್ಟಿಯನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿದೆ.

Advertisement

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್, ಸಿಕ್ಕಿಂ ಮುಖ್ಯ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ಮದ್ರಾಸ್ ಹೈಕೋರ್ಟ್​ನ ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್, ಗುಜರಾತ್ ಹೈಕೋರ್ಟ್​ನ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ಹಿರಿಯ ವಕೀಲ ಪಿ.ಎಸ್.ನರಸಿಂಹ ಅವರ ಹೆಸರನ್ನು ಸುಪ್ರೀಂ ಕೋರ್ಟ್​ ಕೊಲಿಜಿಯಂ ಶಿಫಾರಸು ಮಾಡಿದೆ.

ಇದನ್ನೂ ಓದಿ:ಶಾಸಕರು, ಸಂಸದರ ವಿರುದ್ಧದ ತನಿಖೆಯಲ್ಲಿ ವಿಳಂಬವೇಕೆ?

ರಾಷ್ಟ್ರಪತಿಗಳು ಶಿಫಾರಸುಗಳನ್ನು ಔಪಚಾರಿಕವಾಗಿ ಅನುಮೋದಿಸಿದ ನಂತರ ನೂತನ ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ಪ್ರಸ್ತುತ ಬಲ 24 ಇದ್ದು, ಸದ್ಯ ಅನುಮೋದನೆ ಆಗಿರುವ ಒಂಬತ್ತು ನ್ಯಾಯಾಧೀಶರ ಸೇರ್ಪಡೆಯೊಂದಿಗೆ ಉನ್ನತ ನ್ಯಾಯಾಲಯದಲ್ಲಿ ಇನ್ನೂ ಒಬ್ಬ ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇರಲಿದೆ.

ಶಿಫಾರಸು ಮಾಡಲಾದ ಹೆಸರುಗಳಲ್ಲಿ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗುವ ಸಾಧ್ಯತೆ ಹೆಚ್ಚಿದೆ.

Advertisement

ಜನವರಿ 26, 1950 ರಂದು ಅಸ್ತಿತ್ವಕ್ಕೆ ಬಂದ ಸುಪ್ರೀಂ ಕೋರ್ಟ್, ಅದರ ಆರಂಭದಿಂದ ಕೆಲವೇ ಕೆಲವು ಮಹಿಳಾ ನ್ಯಾಯಾಧೀಶರನ್ನು ಕಂಡಿದೆ. ಕಳೆದ 71 ವರ್ಷಗಳಲ್ಲಿ 1989 ರಲ್ಲಿ ಎಂ ಫಾತಿಮಾ ಬೀವಿಯಿಂದ ಆರಂಭವಾಗಿ ಕೇವಲ ಎಂಟು ಮಹಿಳಾ ನ್ಯಾಯಾಧೀಶರನ್ನು ನೇಮಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next