Advertisement

ಮಾದಕದ್ರವ್ಯ ತಡೆಗೆ ಡೇಟಾ ಬೇಸ್‌

06:00 AM Mar 25, 2018 | Team Udayavani |

ಹೊಸದಿಲ್ಲಿ: ಮಾದಕ ದ್ರವ್ಯ ಕಳ್ಳ ಸಾಗಣೆ ಮಾಡುವವರ ಹಾಗೂ ಈ ಕ್ಷೇತ್ರದಲ್ಲಿನ ಅಪರಾಧಗಳ ವಿರುದ್ಧದ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಮಾದಕ ವಸ್ತುಗಳ ವಿರುದ್ಧ ಕಾನೂನು ಜಾರಿ ಎಂಬ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

Advertisement

ಮಾದಕ ದ್ರವ್ಯ ನಿಯಂತ್ರಣ ಕೇಂದ್ರ (ಎನ್‌ಸಿಬಿ) ಆರಂಭಿಸಲು ಕೇಂದ್ರ ನೆರವು ನೀಡಿದೆ. ಅದರಲ್ಲಿ ಎಷ್ಟು ಪ್ರಮಾಣದಲ್ಲಿ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ ಎಂಬುದು ಸೇರಿದಂತೆ ಎಲ್ಲಾ ಅಂಶಗಳನ್ನೂ ಕಲೆ ಹಾಕಲಾಗುತ್ತದೆ. ಜಿಲ್ಲಾ ಮಟ್ಟದಲ್ಲೂ  ಈ ಮಾಹಿತಿ ವ್ಯವಸ್ಥೆಯನ್ನು ನೋಡಲು ಅವಕಾಶ ಇದೆ ಎಂದರು. ಇದೇ ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ಆಸ್ತಿ ಜಪ್ತಿ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದೂ ಸಿಂಗ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next