ಹೊಸದಿಲ್ಲಿ: ಈ ವರ್ಷದ ಬೇಸಿಗೆ ಭಾರತದಲ್ಲಿ ಎಲ್ ನಿನೊ ಪರಿಸ್ಥಿತಿಗಳು ಮುಂದುವರಿಯುವ ಮುನ್ಸೂಚನೆಯೊಂದಿಗೆ ಬೆಚ್ಚಗಿನ ಆರಂಭ ಅನುಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ.
ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಕರ್ನಾಟಕ, ಮಹಾರಾಷ್ಟ್ರ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಶಾಖದ ದಿನಗಳನ್ನು ಊಹಿಸಲಾಗಿದೆ.
ಮಾರ್ಚ್‌ನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ದಾಖಲಾಗುವ ಸಾಧ್ಯತೆಯಿದ್ದು, ದೀರ್ಘಾವಧಿಯ ಸರಾಸರಿ 29.9 ಮಿಮೀ (117%) ಕ್ಕಿಂತ ಹೆಚ್ಚು ಮಳೆಯಾಗಲಿದೆ.
ಮಾರ್ಚ್‌ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಮಾರ್ಚ್‌ನಲ್ಲಿ ಉತ್ತರ ಮತ್ತು ಮಧ್ಯ ಭಾರತದಲ್ಲಿ ತೀವ್ರ ತಾಪದ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ಹೇಳಲಾಗಿದೆ.
ಚಾಲ್ತಿಯಲ್ಲಿರುವ ಎಲ್ ನಿನೊ ಪರಿಸ್ಥಿತಿಗಳು, ಮಧ್ಯ ಪೆಸಿಫಿಕ್ ಮಹಾಸಾಗರದಲ್ಲಿ ನೀರಿನ ಆವರ್ತಕ ತಾಪಮಾನ ಬೇಸಿಗೆಯ ಅವಧಿಯಲ್ಲಿ ಮುಂದುವರಿಯುತ್ತದೆ. ತಟಸ್ಥ ಪರಿಸ್ಥಿತಿಗಳು ನಂತರ ಅಭಿವೃದ್ಧಿಯಾಗುವ ಸಾಧ್ಯತೆಯಿದೆ ಎಂದು ಮೊಹಾಪಾತ್ರ ಹೇಳಿದ್ದಾರೆ.
ಲಾ ನಿನಾ ಪರಿಸ್ಥಿತಿ ಸಾಮಾನ್ಯವಾಗಿ ಭಾರತದಲ್ಲಿ ಉತ್ತಮ ಮಾನ್ಸೂನ್ ಮಳೆಯೊಂದಿಗೆ ಸಂಬಂಧಿಸಿದ್ಧದ್ದಾಗಿದ್ದು ಮಾನ್ಸೂನ್ ಋತುವಿನ ದ್ವಿತೀಯಾರ್ಧದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.