Advertisement

ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸ

05:51 PM Oct 20, 2022 | Team Udayavani |

ಢಾಕಾ: 2015 ರ ನಂತರ ಮೊದಲ ಬಾರಿಗೆ ಭಾರತ ತಂಡವು ಡಿಸೆಂಬರ್ 4 ರಿಂದ ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಲಿದೆ ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ.

Advertisement

ಢಾಕಾದ ಮೀರ್ಪುರ್ ಸ್ಟೇಡಿಯಂನಲ್ಲಿ ಡಿಸೆಂಬರ್ 4, 7 ಮತ್ತು 10 ರಂದು ಮೂರು ಏಕದಿನ ಪಂದ್ಯಗಳ ಆತಿಥ್ಯ ವಹಿಸಲಿದ್ದು,  ಡಿಸೆಂಬರ್ 14 ರಿಂದ 18 ರವರೆಗೆ ಮೊದಲ ಟೆಸ್ಟ್ ನಡೆಯಲಿದೆ. ಡಿಸೆಂಬರ್ 22 ರಿಂದ 26 ರವರೆಗೆ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್‌ ಢಾಕಾದಲ್ಲಿ ನಡೆಯಲಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎರಡೂ ದೇಶಗಳ ಅಭಿಮಾನಿಗಳು ಮತ್ತೊಂದು ಸ್ಮರಣೀಯ ಸರಣಿಗಾಗಿ ಕಾತರದಿಂದ ಕಾಯುತ್ತಿದ್ದಾರೆ” ಎಂದು ಹಸನ್ ಹೇಳಿದರು.

ವೇಳಾಪಟ್ಟಿಯನ್ನು ದೃಢೀಕರಿಸುವಲ್ಲಿ ನಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ. ಭಾರತ ತಂಡವನ್ನು ಬಾಂಗ್ಲಾದೇಶಕ್ಕೆ ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next