Advertisement

India-UK Relationship: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ

08:21 PM Jul 06, 2024 | Team Udayavani |

ನವದೆಹಲಿ: ಬ್ರಿಟನ್‌ನ ನೂತನ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಲೇಬರ್‌ ಪಕ್ಷದ ನಾಯಕ ಕೀರ್‌ ಸ್ಟಾರ್ಮರ್‌ ಅವರೊಂದಿಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

Advertisement

ಸ್ಟಾರ್ಮರ್‌ ಅವರ ಅಭೂತಪೂರ್ವ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಮೋದಿಯವರು, ಎರಡೂ ದೇಶಗಳ ನಡುವಿನ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಆಳವಾಗಿಸಲು ಬದ್ಧರಾಗಿರುವುದಾಗಿ ಒತ್ತಿ ಹೇಳಿದ್ದಾರೆ. ಇದೇ ವೇಳೆ, ಸ್ಟಾರ್ಮರ್‌ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಮೋದಿ ಆಹ್ವಾನಿಸಿದ್ದಾರೆ.

ಉಭಯ ರಾಷ್ಟ್ರಗಳಿಗೆ ಅನುಕೂಲವಾಗುವಂಥ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ಪೂರ್ಣಗೊಳಿಸುವ ನಿಟ್ಟಿನಲ್ಲೂ ಅವರಿಬ್ಬರು ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಯ ಬಗ್ಗೆ ಉಭಯ ನಾಯಕರು ಪ್ರಸ್ತಾಪಿಸಿದ್ದು, ಜನರ ನಡುವಿನ ಆತ್ಮೀಯ ಬಾಂಧವ್ಯವನ್ನು ವೃದ್ಧಿಸುವ ಕುರಿತೂ ಮಾತನಾಡಿದ್ದಾರೆ.

ಈ ಮಾತುಕತೆ ಬಗ್ಗೆ ಶನಿವಾರ ಟ್ವೀಟ್‌ ಮಾಡಿದ ಪ್ರಧಾನಿ ಮೋದಿ, “ಯುಕೆಯ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದೆ. ಉಭಯ ದೇಶಗಳ ಜನರ ಅಭಿವೃದ್ಧಿಗಾಗಿ ಮತ್ತು ಜಾಗತಿಕ ಒಳಿತಿಗಾಗಿ ನಮ್ಮ ಬಾಂಧವ್ಯವನ್ನು ಮತ್ತಷ್ಟು ಎತ್ತರಕ್ಕೇರಿಸಲು ಬದ್ಧವಿರುವುದಾಗಿ ತಿಳಿಸಿದ್ದೇನೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next