Advertisement

ದಿಗ್ಗಜರ ಸಾಲಿಗೆ ಕೊಹ್ಲಿ ಸೇರಿಸಿದ ಗಂಗೂಲಿ

06:15 AM Feb 10, 2018 | |

ನವದೆಹಲಿ: ಕ್ರಿಕೆಟಿಗ ವಿರಾಟ್‌ ಕೊಹ್ಲಿ ಆಟಕ್ಕೆ ಮಾಜಿ ಮತ್ತು ಹಾಲಿ ಆಟಗಾರರು ಭಾರೀ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ, ಕೊಹ್ಲಿಯನ್ನು ಸಚಿನ್‌ ತೆಂಡುಲ್ಕರ್‌, ರಾಹುಲ್‌ ದ್ರಾವಿಡ್‌, ವಿವಿಎಸ್‌ ಲಕ್ಷ್ಮಣ್‌, ವೀರೇಂದ್ರ ಸೆಹ್ವಾಗ್‌, ರಿಕ್ಕಿ ಪಾಂಟಿಂಗ್‌ ಮತ್ತು ಬ್ರಿಯಾನ್‌ ಲಾರಾ ಸಾಲಿಗೆ ಸೇರ್ಪಡೆ ಮಾಡಿದ್ದಾರೆ.

Advertisement

ಕೊಹ್ಲಿ ಬಗ್ಗೆ ಮಾತನಾಡಿದ ಗಂಗೂಲಿ, ವಿರಾಟ್‌ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಪ್ರತಿ ಪಂದ್ಯ ಪ್ರತಿ ಇನಿಂಗ್ಸ್‌ನಲ್ಲಿಯೂ ಆಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಏಕದಿನದಲ್ಲಿ 34 ಶತಕ ದಾಖಲಿಸಿದ್ದಾರೆ. ಈ ಮೂಲಕ ದಿಗ್ಗಜರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೊಹ್ಲಿಯನ್ನು ಹೊರತುಪಡಿಸಿ ಭಾರತದ ಇತರೆ ಬ್ಯಾಟ್ಸ್‌ಮನ್‌ಗಳು ಮೂರಂಕಿಯ ಮೊತ್ತವನ್ನು ದಾಟುತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next