Advertisement

ಬೆಂಗಳೂರು ಟೆಸ್ಟ್‌ನಿಂದ ಹೊರಬಿದ್ದ ವೇಗಿ ಶಮಿ

06:00 AM Jun 12, 2018 | Team Udayavani |

ಬೆಂಗಳೂರು: ಫಿಟ್‌ನೆಸ್‌ ಟೆಸ್ಟ್‌ನಲ್ಲಿ ತೇರ್ಗಡೆಯಾಗಲು ವಿಫ‌ಲರಾದ ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅಫ್ಘಾನಿಸ್ಥಾನ ವಿರುದ್ಧದ ಟೆಸ್ಟ್‌ ತಂಡದಿಂದ ಹೊರಬಿದ್ದಿದ್ದಾರೆ.  ಶಮಿ ಬದಲಿಗೆ ದಿಲ್ಲಿಯ ಮಧ್ಯಮ ವೇಗದ ಬೌಲರ್‌ ನವದೀಪ್‌ ಸೈನಿ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಸೈನಿ ಭಾರತ ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲು.

Advertisement

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ (ಎನ್‌ಸಿಎ) ಶಮಿ ಫಿಟ್‌ನೆಸ್‌ ಪರೀಕ್ಷೆಗೆ ಒಳಗಾಗಿದ್ದರು. ನವದೀಪ್‌ ಸೈನಿ ಭಾರತದ ಭರವಸೆಯ ವೇಗಿಗಳಲ್ಲಿ ಒಬ್ಬರಾಗಿದ್ದು, ಮುಂದಿನ ತಿಂಗಳು “ಎ’ ತಂಡದೊಂದಿಗೆ ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳಲಿದ್ದಾರೆ. 31 ಪ್ರಥಮ ದರ್ಜೆ ಪಂದ್ಯಗಳಿಂದ 96 ವಿಕೆಟ್‌ ಉರುಳಿಸಿದ ಸಾಧನೆ ಸೈನಿ ಅವರದು.

Advertisement

Udayavani is now on Telegram. Click here to join our channel and stay updated with the latest news.

Next