ನಾಗ್ಪುರ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿದೆ. ಮೊದಲ ಪಂದ್ಯದಲ್ಲಿ ಆಡಿದ ಬಳಗವನ್ನೇ ಭಾರತ ಈ ಪಂದ್ಯದಲ್ಲಿ ಆಡಲಿದೆ.
ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸೀಸ್ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಟರ್ನರ್ ಮತ್ತು ಬೆಹ್ರಂಡಾಫ್ ಬದಲಿಗೆ ಶಾನ್ ಮಾರ್ಶ್ ಮತ್ತು ನಾಥನ್ ಲಿಯೋನ್ ಅವಕಾಶ ಪಡೆದಿದ್ದಾರೆ.
ಟಾಸ್ ಸೋತ ನಂತರ ಮಾತನಾಡಿದ ಭಾರತೀಯ ನಾಯಕ ಕೊಹ್ಲಿ, ನಾವು ಟಾಸ್ ಗೆದ್ದಿದ್ದರೆ ಬ್ಯಾಟಿಂಗ್ ಮಾಡುತ್ತಿದ್ದೆ. ಹಾಗಾಗಿ ಟಾಸ್ ಸೋತು ಏನು ನಷ್ಟವಾಗಿಲ್ಲ ಎಂದರು. ವಿಶಾಖಪಟ್ಟಣದಲ್ಲಿ ನಡೆದಿದ್ದ ಮೊದಲ ಪಂದ್ಯವನ್ನು ಭಾರತ ಆರು ವಿಕೆಟ್ ಗಳಿಂದ ಗೆದ್ದಿತ್ತು.
ತಂಡಗಳು:
ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾ), ಅಂಬಾಟಿ ರಾಯುಡು, ಎಂಎಸ್ ಧೋನಿ (ಕೀ), ಕೇದಾರ ಜಾಧವ್, ವಿಜಯ್ ಶಂಕರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಆರನ್ ಫಿಂಚ್ (ನಾ), ಶಾನ್ ಮಾರ್ಷ್, ಮೋರಿಸ್ ಸ್ಟೊಯಿನಿಸ್, ಪೀಟರ್ ಹ್ಯಾಂಡ್ಸ್ ಕಾಂಬ್, ಗ್ಲೆನ್ ಮ್ಯಾಕ್ಸ್ ವೆಲ್, ಅಲೆಕ್ಸ್ ಕ್ಯಾರಿ (ಕೀ ), ನಾಥನ್ ಕೌಲ್ಟರ್-ನೈಲ್, ಪ್ಯಾಟ್ ಕಮ್ಮಿನ್ಸ್, ನಾಥನ್ ಲಿಯಾನ್