ಮುಂಬಯಿ: ಮಹತ್ವದ ಆಸ್ಟ್ರೇಲಿಯ ಪ್ರವಾಸಕ್ಕೆ ಭಾರತದ ಮೂರೂ ತಂಡಗಳನ್ನು ಸೋಮವಾರ ರಾತ್ರಿ ಪ್ರಕಟಿಸಲಾಗಿದೆ. ಪಿಎಲ್ ವೇಳೆ ಗಾಯಾಳಾಗಿರುವ ರೋಹಿತ್ ಶರ್ಮ ಈ ಪ್ರವಾಸಕ್ಕೆ ಲಭ್ಯರಾಗುತ್ತಿಲ್ಲ. ಮಂಗಳೂರಿನ ಕ್ರಿಕೆಟಿಗ ಕೆ.ಎಲ್. ರಾಹುಲ್ ಅವರನ್ನು ತಂಡದ ಉಪನಾಯಕನನ್ನಾಗಿ ನೇಮಿಸಲಾಗಿದೆ. ಹಾಗೆಯೇ ರಾಜ್ಯದ ಮತ್ತೋರ್ವ ಆಟಗಾರ ಮಾಯಾಂಕ್ ಅಗರ್ವಾಲ್ ಏಕದಿನ ಹಾಗೂ ಟಿ20 ತಂಡಗಳೆರಡರಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.
ಇದೇ ವೇಳೆ ರಾಹುಲ್ ಟೆಸ್ಟ್ ತಂಡಕ್ಕೆ ಮರಳಿ ಕರೆ ಪಡೆದರು. ಗಾಯಾಳು ಇಶಾಂತ್, ಭುವನೇಶ್ವರ್ ಜಾಗಕ್ಕೆ ಸೈನಿ ಮತ್ತು ಸಿರಾಜ್ ಭರ್ತಿಯಾದರು. ಕೆಕೆಆರ್‌ನ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ರಾಜ್ಯದ ಮಾಜಿ ಸ್ಪಿನ್ನರ್ ಸುನೀಲ್ ಜೋಶಿ ನೇತೃತ್ವದ ನೂತನ ಆಯ್ಕೆ ಸಮಿತಿ ಆರಿಸಿದ ಮೊದಲ ತಂಡ ಇದಾಗಿದೆ.
ಭಾರತ ಟಿ20 ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್ (ಉಪನಾಯಕ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ.
ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಕೆ.ಎಲ್. ರಾಹುಲ್ (ಉಪನಾಯಕ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್, ರವೀಂದ್ರ ಜಡೇಜ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾದೂìಲ್ ಠಾಕೂರ್.
ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್. ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಭಮನ್ ಗಿಲ್, ವೃದ್ಧಿಮಾನ್ ಸಾಹಾ, ರಿಷಭ್ ಪಂತ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್.