Advertisement

ಬೆಂಗಳೂರಿನಲ್ಲಿ ಭಾರತ-ಲಂಕಾ ಡೇ ನೈಟ್‌ ಟೆಸ್ಟ್‌: ಸೌರವ್‌ ಗಂಗೂಲಿ

09:59 PM Feb 03, 2022 | Team Udayavani |

ಹೊಸದಿಲ್ಲಿ: ಪ್ರವಾಸಿ ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ಡೇ-ನೈಟ್‌ ಟೆಸ್ಟ್‌ ಪಂದ್ಯವನ್ನು ಆಡಲಾಗುವುದು ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ತಿಳಿಸಿದ್ದಾರೆ.

Advertisement

ಸರಣಿಯ ಉಳಿದ ಪಂದ್ಯಗಳ ತಾಣವನ್ನು ಇನ್ನೂ ನಿರ್ಧರಿಸಲಾಗಿಲ್ಲ, ಇದನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಗಂಗೂಲಿ ಹೇಳಿದರು.

ಇದು ಭಾರತದಲ್ಲಿ ನಡೆಯುವ 3ನೇ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯವಾಗಲಿದೆ. ಇದಕ್ಕೂ ಮೊದಲು 2019ರಲ್ಲಿ ಬಾಂಗ್ಲಾದೇಶ ವಿರುದ್ಧ ಕೋಲ್ಕತಾದಲ್ಲಿ, ಕಳೆದ ವರ್ಷ ಇಂಗ್ಲೆಂಡ್‌ ವಿರುದ್ಧ ಅಹ್ಮದಾಬಾದ್‌ನಲ್ಲಿ ಹಗಲು-ರಾತ್ರಿ ಟೆಸ್ಟ್‌ ಆಡಲಾಗಿತ್ತು. ಈ ಪಂದ್ಯಗಳಲ್ಲಿ ಭಾರತ ಕ್ರಮವಾಗಿ ಇನ್ನಿಂಗ್ಸ್‌/46 ರನ್‌ ಹಾಗೂ 10 ವಿಕೆಟ್‌ ಜಯ ಗಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next