ಹೊಸದಿಲ್ಲಿ: ಕರ್ನಾಟಕದ ರನ್ ಯಂತ್ರ ಮಾಯಾಂಕ್ ಅಗರ್ವಾಲ್ ಅವರಿಗೆ ಕೊನೆಗೂ ಭಾರತ ತಂಡದ ಬಾಗಿಲು ತೆರೆದಿದೆ. ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ 2 ಪಂದ್ಯಗಳ ಟೆಸ್ಟ್ ಸರಣಿಗಾಗಿ ಅವರನ್ನು ಟೀಮ್ ಇಂಡಿಯಾಕ್ಕೆ ಸೇರಿಸಿಕೊಳ್ಳಲಾಗಿದೆ.
ಪೇಸ್ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ಮೊದಲ ಸಲ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಶಿಖರ್ ಧವನ್, ಕರುಣ್ ನಾಯರ್, ಇಶಾಂತ್ ಶರ್ಮ, ಹಾರ್ದಿಕ್ ಪಾಂಡ್ಯ, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಅವರು ಈ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಮುರಳಿ ವಿಜಯ್ ಬದಲು ಪೃಥ್ವಿ ಶಾ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೀಪರ್ ಆಗಿ ರಿಷಬ್ ಪಂತ್ ಮುಂದುವರಿಯಲಿದ್ದಾರೆ. ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಮಾಯಾಂಕ್ ಅಗರ್ವಾಲ್ ಕಳೆದ ರಣಜಿ ಋತುವಿನಲ್ಲಿ ಒಂದು ತ್ರಿಶತಕ ಸಹಿತ 105.45ರ ಸರಾಸರಿಯಲ್ಲಿ 1,160 ರನ್ ಪೇರಿಸಿದ್ದರು.
ಸರಣಿಯ ಮೊದಲ ಟೆಸ್ಟ್ ಪಂದ್ಯ ಅ. 4ರಿಂದ ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್. ರಾಹುಲ್, ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಶಾದೂìಲ್ ಠಾಕೂರ್.